Numbers 4:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಗಳದ ಸ್ತಂಭಗಳು ಮತ್ತು ಅವುಗಳ ಗದ್ದಿಗೇಕಲ್ಲುಗಳು, ಅಗುಳಿಗಳು, ಹಗ್ಗಗಳು ಮತ್ತು ಅವರ ಕೆಲಸಕ್ಕೆ ಬೇಕಾದ ಎಲ್ಲಾ ಉಪಕರಣಗಳು. ಅವರು ವರ್ಗಾಯಿಸಬೇಕಾದ ಮತ್ತು ಕಾವಲುಕಾಯಬೇಕಾದ ವಸ್ತುಗಳನ್ನು ನೀನು ಹೆಸರೆಸರಾಗಿ ಅವರಿಗೆ ವಹಿಸಿಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಗಳದ ಕಂಬಗಳನ್ನು, ಇವುಗಳ ಗದ್ದಿಗೆಕಲ್ಲುಗಳನ್ನೂ, ಗೂಟಗಳನ್ನೂ, ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಜವಾಬ್ದಾರಿಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.
Kannada BSI Bible 2016
ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳ ಗದ್ದಿಗೇಕಲ್ಲುಗಳನ್ನೂ ಗೂಟಗಳನ್ನೂ ಹಗ್ಗಗಳನ್ನೂ ಎಲ್ಲಾ ಉಪಕರಣಗಳನ್ನೂ ಹೊರಬೇಕು; ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು. ಅವರವರ ಹೊರೆಗಳನ್ನೆಲ್ಲಾ ನೀವು ಹೆಸರು ಹೇಳಿ ಗೊತ್ತುಮಾಡಬೇಕು.
Kannada Bible (KNCL) BSI 2016
ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೆ ಕಲ್ಲುಗಳನ್ನು, ಗೂಟಗಳನ್ನು, ಹಗ್ಗಗಳನ್ನು ಮತ್ತು ಅವುಗಳ ಎಲ್ಲ ಉಪಕರಣಗಳನ್ನು ಹೊರಬೇಕು. ಅವರವರ ಹೊರೆಗಳನ್ನೆಲ್ಲ ನೀವೇ ಹೆಸರಿಸಿ ಗೊತ್ತುಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುತ್ತಲಿರುವ ಅಂಗಳದ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ ಅದರ ಗೂಟಗಳೂ ಅವುಗಳ ಹಗ್ಗಗಳೂ ಅವುಗಳ ಎಲ್ಲಾ ಸಲಕರಣೆಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವುದಕ್ಕೆ ಕೊಟ್ಟ ಅಪ್ಪಣೆಯ ಸಲಕರಣೆಗಳನ್ನು ನೀವು ಹೆಸರೆಸರಾಗಿ ಎಣಿಸಬೇಕು.