Numbers 4:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದರ್ಶನಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಮಹಾಯಾಜಕ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.
Kannada BSI Bible 2016
ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಕೈ ಕೆಳಗೆ ಅದನ್ನು ನಡಿಸಬೇಕು.
Kannada Bible (KNCL) BSI 2016
ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗ ಈತಮಾರನ ಕೈಕೆಳಗೆ ಇದನ್ನೆಲ್ಲಾ ಮಾಡಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.”