Numbers 4:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆ ಆರೋನರೂ, ಸಮುದಾಯದ ಪ್ರಧಾನರೂ ಕುಲ ಮತ್ತು ಕುಟುಂಬಗಳಿಗನುಗುಣವಾಗಿ ಕೆಹಾತ್ಯರಲ್ಲಿ ಮೂವತ್ತು ವರ್ಷದಿಂದ ಮೊದಲುಗೊಂಡು ಐವತ್ತು ವರ್ಷದೊಳಗಿರುವ ಗಂಡಸರನ್ನು ಲೆಕ್ಕಿಸಿದರು. ದೇವದರ್ಶನಗುಡಾರಕ್ಕೋಸ್ಕರ ಸೇವೆಯ ದಳದಲ್ಲಿ ಕೆಲಸ ಮಾಡಲು ಯೋಗ್ಯರಾದ ಗಂಡಸರನ್ನೇ ಅವರು ಲೆಕ್ಕಿಸಿದರು. (Verses 34-35)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರೂ, ಸಮೂಹದ ಪ್ರಧಾನರೂ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಎಣಿಕೆ ಮಾಡಿದರು.
Kannada BSI Bible 2016
ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರೂ ಸಮೂಹದ ಪ್ರಧಾನರೂ ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿದರು.
Kannada Bible (KNCL) BSI 2016
ಮೋಶೆ ಹಾಗು ಆರೋನರು ಮತ್ತು ಸಮೂಹದ ಮುಖ್ಯಸ್ಥರು ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರ್ಷದವರೆಗಿನ ವಯಸ್ಸುಳ್ಳವರಾಗಿದ್ದಾರೋ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಎಣಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯೂ, ಆರೋನನೂ, ಸಭೆಯ ಮುಖ್ಯಸ್ಥನೂ, ಕೊಹಾತ್ಯರ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ