Numbers 4:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಗೇರ್ಷೋನ್ಯರನ್ನು ಲೆಕ್ಕಿಸಿದರು. ಅವರಲ್ಲಿ ದೇವದರ್ಶನಗುಡಾರದ ವಿಶೇಷ ಕೆಲಸವನ್ನು ಮಾಡತಕ್ಕವರು ಇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
Kannada BSI Bible 2016
ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಅವರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನ.
Kannada Bible (KNCL) BSI 2016
ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಹಾಗು ಆರೋನರಿಂದ ಎಣಿಕೆಯಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಅಪ್ಪಣೆಯ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಗೇರ್ಷೋನನ ಪುತ್ರರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನದ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.