Numbers 4:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಅವರನ್ನು ಲೆಕ್ಕಿಸಿದರು. ಮೆರಾರೀಯರ ಕುಲಗಳಿಂದ ಈ ಗಂಡಸರನ್ನು ದಾಖಲಾತಿ ಮಾಡಿಕೊಳ್ಳಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಮತ್ತು ಆರೋನರು ಮೆರಾರೀಯರ ಗೋತ್ರಕುಟುಂಬವನ್ನು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಎಂದು ಗೊತ್ತಾಯಿತು.
Kannada BSI Bible 2016
ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಮೆರಾರೀಯರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ ಇಷ್ಟೇ.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಮೆರಾರೀಯರನ್ನು ಮೋಶೆ - ಆರೋನರು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ.