Numbers 4:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನೂ ಲೆಕ್ಕಿಸಲ್ಪಟ್ಟನು. ಪ್ರತಿಯೊಬ್ಬನಿಗೂ ವರ್ಗಾವಣೆಗಾಗಿ ವಸ್ತುಗಳನ್ನು ಕಟ್ಟುವ ಮತ್ತು ವರ್ಗಾವಣೆ ಕೆಲಸದ ಕರ್ತವ್ಯಗಳನ್ನು ಗೊತ್ತುಪಡಿಸಲಾಯಿತು. ಯೆಹೋವನು ಆಜ್ಞಾಪಿಸಿದ ಮೇರೆಗೆ ಇದು ಮಾಡಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ, ಜವಾಬ್ದಾರಿಯೂ ನಿಗದಿಪಡಿಸಲಾಯಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.
Kannada BSI Bible 2016
ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಆಜ್ಞಾಪಿಸಿದ ಮೇರೆಗೆ ಅವನಿಂದ ಪ್ರತಿಯೊಬ್ಬನಿಗೆ ಅವನವನ ಕೆಲಸವೂ ಹೊರೆಯೂ ಗೊತ್ತು ಮಾಡಲ್ಪಟ್ಟಿತು. ಹೀಗೆ ಯೆಹೋವನ ಆಜ್ಞೆಯ ಮೇರೆಗೆ ಲೆಕ್ಕವಾಯಿತು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು.