Numbers 4:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರ ಪೆಟ್ಟಿಗೆಯ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.
Kannada BSI Bible 2016
ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮೇಲೆ ಕಡಲುಹಂದಿಯ ತೊಗಲನ್ನೂ ನೀಲಿಬಟ್ಟೆಯನ್ನೂ ಹೊದಿಸಿ [ಮಂಜೂಷದ ಬಳೆಗಳಲ್ಲಿ] ಹೊರುವ ಕೋಲುಗಳನ್ನು ಸೇರಿಸಬೇಕು.
Kannada Bible (KNCL) BSI 2016
ಅದರ ಮೇಲೆ ಹಸನಾದ ತೊಗಲನ್ನು ಮತ್ತು ನೀಲಿ ಬಟ್ಟೆಯನ್ನು ಹೊದಿಸಬೇಕು. (ಮಂಜೂಷದ ಬಳೆಗಳಿಗೆ) ಹೊರುವ ಕೋಲುಗಳನ್ನು ಸಿಕ್ಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.