Numbers 4:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕೋಲುಗಳನ್ನು ಮೇಜಿನ ಬಳೆಗಳಲ್ಲಿ ಸೇರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.
Kannada BSI Bible 2016
ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವೆಲ್ಲವುಗಳ ಮೇಲೆ ಅವರು ರಕ್ತವರ್ಣದ ಬಟ್ಟೆಯನ್ನು ಹಾಸಿ ಕಡಲುಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.
Kannada Bible (KNCL) BSI 2016
ಅವೆಲ್ಲವುಗಳ ಮೇಲೆ ರಕ್ತವರ್ಣದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಸಿಕ್ಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.