Numbers 5:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
Kannada BSI Bible 2016
ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
Kannada Bible (KNCL) BSI 2016
ಒಂದು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು.