Numbers 5:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಆಕೆಯ ದೋಷವನ್ನು ಹೊರಪಡಿಸುವ ಧಾನ್ಯಸಮರ್ಪಣೆಯನ್ನು ಅವಳ ಕೈಯಲ್ಲಿ ಇಡಬೇಕು. ಅದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆ. ಅದೇ ಸಮಯದಲ್ಲಿ ಶಾಪವನ್ನು ಉಂಟುಮಾಡುವ ನೀರಿನ ವಿಶೇಷ ಪಾತ್ರೆಯನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
Kannada BSI Bible 2016
ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಸ್ತ್ರೀಯನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಹಾದರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
Kannada Bible (KNCL) BSI 2016
ಯಾಜಕನು ಆಕೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಕೂದಲನ್ನು ಕೆದರಿಸಿ, ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿಡಬೇಕು; ಶಾಪವನ್ನು ತರುವ ವಿಷಕರವಾದ ನೀರನ್ನು ತನ್ನ ಕೈಯಲ್ಲೇ ಹಿಡಿದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು.