Numbers 5:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಳಿಕ ಯಾಜಕನು ಸ್ತ್ರೀಗೆ ಸುಳ್ಳಾಡದೆ ಸತ್ಯವನ್ನೇ ಹೇಳಬೇಕೆಂದು ಪ್ರಮಾಣ ಮಾಡಿಸುವನು. ಯಾಜಕನು ಅವಳಿಗೆ ಹೀಗೆನ್ನಬೇಕು: ‘ನೀನು ಪರಪುರುಷನ ಸಂಗ ಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕೃತ್ಯವನ್ನು ಮಾಡದೆ ಇರುವವಳಾದರೆ, ಶಾಪವನ್ನು ಉಂಟುಮಾಡುವ ಕಹಿನೀರಿನಿಂದ ನಿನಗೆ ಹಾನಿಯಾಗಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.
Kannada BSI Bible 2016
ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನು ಅವಳಿಂದ ಶಪಥಪೂರ್ವಕವಾದ ಪ್ರಮಾಣವಾಕ್ಯವನ್ನು ನುಡಿಸುವವನಾಗಿ ಹೀಗನ್ನಬೇಕು - ನೀನು ಪರಪುರುಷನ ಸಂಗಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕಾರ್ಯವನ್ನು ಮಾಡದೆ ಇರುವವಳಾದರೆ ಶಾಪವನ್ನುಂಟು ಮಾಡುವ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗಬಾರದು.
Kannada Bible (KNCL) BSI 2016
ಅದೇ ಯಾಜಕನು ಅವಳಿಂದ ಶಪಥಪೂರ್ವಕ ಪ್ರಮಾಣ ಮಾಡಿಸುತ್ತಾ ಅವಳಿಗೆ - “ನೀನು ನಿನ್ನ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ, ಪರಪುರುಷನನ್ನು ಕೂಡದೆ, ಅಶುದ್ಧಳಾಗದೆ ಇರುವವಳಾದರೆ ಶಾಪ ತರುವ ಈ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ.