Numbers 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀನು ಈ ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.’ “ಬಳಿಕ ಯಾಜಕನು ಆ ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾಡಿದ್ದರೆ, ಈ ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.
Kannada BSI Bible 2016
ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಹೊಟ್ಟೆ ಉಬ್ಬುವಂತೆಯೂ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇವಿುಸಲಿ.
Kannada Bible (KNCL) BSI 2016
ಸರ್ವೇಶ್ವರನು ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ, ನಿನ್ನ ಹೊಟ್ಟೆ ಉಬ್ಬುವಂತೆ ಮಾಡಿ, ನೀನು ನಿನ್ನ ಜನರ ಮಧ್ಯೆ ಶಾಪಗ್ರಸ್ತಳನ್ನಾಗಿ ಮಾಡಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವನು. ನಿನ್ನ ಜನರು ನಿನ್ನನ್ನು ಶಪಿಸುವರು, ತಿರಸ್ಕರಿಸುವರು.