Numbers 5:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
Kannada BSI Bible 2016
ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆಯೂ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಮಾಡುವದು ಎಂದು ಹೇಳಬೇಕು. ಅದಕ್ಕೆ ಆ ಸ್ತ್ರೀಯು - ಆಮೆನ್, ಹಾಗೆಯೇ ಆಗಲಿ ಎಂದು ಹೇಳಬೇಕು.
Kannada Bible (KNCL) BSI 2016
ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್,” ಎಂದು ಹೇಳಬೇಕು.