Numbers 5:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಶಾಪವನ್ನು ಬರಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಈ ನೀರು ಅವಳೊಳಗೆ ಸೇರುವುದು. ಅವಳು ದೋಷಿಯಾಗಿದ್ದರೆ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.
Kannada BSI Bible 2016
ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ವಿಷಕರಜಲದಲ್ಲಿ ಸೇರುವಂತೆ ಒರಸಿ ಶಾಪವನ್ನುಂಟುಮಾಡುವ ಆ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಶಾಪವನ್ನುಂಟುಮಾಡುವ ಆ ನೀರು ಅವಳೊಳಗೆ ಸೇರಿ ವಿಷಕರವಾಗುವದು.
Kannada Bible (KNCL) BSI 2016
ಶಾಪತರುವ ಆ ನೀರನ್ನು ಆಕೆಗೆ ಕುಡಿಸಲಿ; ಆ ನೀರು ಅವಳೊಳಗೆ ಸೇರಿ ವಿಷಕರವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಗೆ ಶಪಿಸುವಂಥಹ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವುದು.