Numbers 5:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾಜಕನು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯನ್ನು ಆಕೆಯ ಕೈಗಳಿಂದ ತೆಗೆದುಕೊಂಡು ಅದನ್ನು ಯೆಹೋವನ ಮುಂದೆ ಪ್ರತಿಷ್ಠಿಸಿ, ಬಳಿಕ ಅದನ್ನು ವೇದಿಕೆಯ ಮೇಲೆ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.
Kannada BSI Bible 2016
ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಜಕನು ಸ್ತ್ರೀಯ ಕೈಯಿಂದ ವ್ಯಭಿಚಾರ ಸಂಶಯ ವಿಷಯವಾದ ಆ ಹಿಟ್ಟನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿ ಯಜ್ಞವೇದಿಯ ಹತ್ತಿರ ತರಬೇಕು.
Kannada Bible (KNCL) BSI 2016
ಆಮೇಲೆ ವ್ಯಭಿಚಾರ ಸಂಶಯ ಸೂಚಕವಾದ ಆ ಹಿಟ್ಟನ್ನು ಅವಳ ಕೈಯಿಂದ ತೆಗೆದುಕೊಂಡ ಯಾಜಕನು ಬಲಿಪೀಠದ ಹತ್ತಿರಕ್ಕೆ ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು.