Numbers 5:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳು ಅಶುದ್ಧಳಾಗಿದ್ದರೆ ಮತ್ತು ತನ್ನ ಗಂಡನಿಗೆ ವಿರುದ್ಧವಾಗಿ ಪಾಪಮಾಡಿದ್ದರೆ, ನೀರು ಅವಳಿಗೆ ಹಾನಿಯನ್ನು ಉಂಟುಮಾಡುವುದು, ನೀರು ಅವಳೊಳಗೆ ಹೋಗಿ ಅವಳಿಗೆ ಮಹಾಸಂಕಟವನ್ನು ಉಂಟುಮಾಡುವುದು. ನೀರು ಅವಳನ್ನು ಆ ಕೂಡಲೇ ಬಂಜೆಯನ್ನಾಗಿ ಮಾಡುವುದು. ಅವಳು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.
Kannada BSI Bible 2016
ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ದೋಷಿಯಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಕುಡಿದನಂತರ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವದರಿಂದ ಅವಳ ಹೊಟ್ಟೆ ಉಬ್ಬುವದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು; ಆ ಸ್ತ್ರೀಯು ತನ್ನ ಜನರೊಳಗೆ ಶಾಪಗ್ರಸ್ತಳಾಗುವಳು.
Kannada Bible (KNCL) BSI 2016
ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ, ಶಪಿಸುವ ನೀರು ಆಕೆಯೊಳಗೆ ಸೇರಿ ಕಹಿಯಾಗುವುದು. ಅವಳ ಹೊಟ್ಟೆ ಉಬ್ಬಿ, ಅವಳ ತೊಡೆ ಕ್ಷೀಣವಾಗುವುದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.