Numbers 5:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಾತಿವ್ರತ್ಯವನ್ನು ಬಿಟ್ಟು ಜಾರತ್ವ ಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಮಾಡಬೇಕಾದದ್ದು ಇದೇ. ಯಾಜಕನು ಸ್ತ್ರೀಗೆ ಯೆಹೋವನ ಮುಂದೆ ನಿಲ್ಲಲು ಹೇಳಬೇಕು. ಆಗ ಯಾಜಕನು ಈ ಎಲ್ಲಾ ಸಂಗತಿಗಳನ್ನು ಮಾಡುವನು. ಇದು ನಿಯಮವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು.
Kannada BSI Bible 2016
ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾತಿವ್ರತ್ಯವನ್ನು ಬಿಟ್ಟು ಜಾರತ್ವಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಬೇಕು; ಯಾಜಕನು ಅವಳ ವಿಷಯದಲ್ಲಿ ಈ ನಿಯಮದ ಪ್ರಕಾರ ಮಾಡಬೇಕು.
Kannada Bible (KNCL) BSI 2016
ಅಥವಾ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗ ಅವನು ಅವಳನ್ನು ಸರ್ವೇಶ್ವರನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿ ನಿಯಮವನ್ನು ನೆರವೇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು.