Numbers 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಅಪ್ಪಣೆಯ ಮೇರೆಗೆ ಇಸ್ರೇಲರು ತಮ್ಮಲ್ಲಿರುವ ಅಂಥವರೆಲ್ಲರನ್ನೂ ಪಾಳೆಯದ ಹೊರಗಿರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.
Kannada BSI Bible 2016
ಆಗ ಇಸ್ರಾಯೇಲ್‌ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್‌ ಮಕ್ಕಳು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವದರಿಂದ ಅವರು ಅದನ್ನು ಅಪವಿತ್ರಮಾಡಬಾರದು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು; ಅಂಥವರೆಲ್ಲರನ್ನೂ ಪಾಳೆಯದಿಂದ ಹೊರಡಿಸಿದರು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಅಂಥವರೆಲ್ಲರನ್ನು ಪಾಳೆಯದಿಂದ ಹೊರದೂಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ಹಾಗೆ ಮಾಡಿ, ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರ ಇಸ್ರಾಯೇಲರು ಮಾಡಿದರು.