Numbers 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಆಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳುಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,
Kannada BSI Bible 2016
ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು.
Kannada Bible (KNCL) BSI 2016
ಯಾವ ಗಂಡಸೇ ಆಗಲಿ ಹೆಂಗಸೇ ಆಗಲಿ, ಮತ್ತೊಬ್ಬನನ್ನು ಮೋಸಗೊಳಿಸಿ ಸರ್ವೇಶ್ವರನಲ್ಲಿ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದರೆ, ಅಂಥವರು ಅಪರಾಧಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ.