Numbers 5:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಂಡವನ್ನು ತೆಗೆದುಕೊಳ್ಳತಕ್ಕವನು ತೀರಿಹೋಗಿ, ಹತ್ತಿರ ಸಂಬಂಧಿಯೂ ಇಲ್ಲದ ಪಕ್ಷಕ್ಕೆ, ಆ ದ್ರವ್ಯವನ್ನು ಯೆಹೋವನಿಗೆ ಕೊಡಬೇಕು. ಅವನು ಯಾಜಕನಿಗೆ ಪೂರ್ಣ ಬೆಲೆಯನ್ನು ಕೊಡಬೇಕು. ತಪ್ಪು ಮಾಡಿದವನು ಯಾಜಕನಿಗೆ ಒಂದು ಟಗರನ್ನೂ ತಂದುಕೊಡಬೇಕು. ಈ ಟಗರನ್ನು ತಪ್ಪುಮಾಡಿದವನ ಪ್ರಾಯಶ್ಚಿತ್ತಕ್ಕಾಗಿ ಯಜ್ಞಮಾಡಬೇಕು. ಆದರೆ ಉಳಿದದ್ದನ್ನು ಯಾಜಕನು ಇಟ್ಟುಕೊಳ್ಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.
Kannada BSI Bible 2016
ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಆ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಂಡವನ್ನು ತೆಗೆದುಕೊಳ್ಳತಕ್ಕವನು [ತೀರಿಹೋಗಿ] ಬಾಧ್ಯನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತಯಜ್ಞದ ಟಗರು ಈ ಎರಡೂ ಯಾಜಕನಿಗೆ ಆಗಬೇಕು.
Kannada Bible (KNCL) BSI 2016
ದಂಡವನ್ನು ತೆಗೆದುಕೊಳ್ಳ ತಕ್ಕವನು ತೀರಿಹೋಗಿ ಬಾಧ್ಯಸ್ಥನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯ ಸರ್ವೇಶ್ವರನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಅರ್ಪಿಸಲ್ಪಡುವ ಪ್ರಾಯಶ್ಚಿತ್ತ ಬಲಿಪ್ರಾಣಿಯಾದ ಟಗರು ಇವೆರಡೂ ಯಾಜಕನಿಗೆ ಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು.