Numbers 5:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.” (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
Kannada BSI Bible 2016
ಇದಲ್ಲದೆ ಇಸ್ರಾಯೇಲ್‌ ಮಕ್ಕಳು ತರುವ ಸಕಲ ಪರಿಶುದ್ಧವಾದ ಬಲಿಗಳೆಲ್ಲಾ ಯಾಜಕನಿಗೇ ಸಲ್ಲಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ದೇವರ ವಸ್ತುಗಳೆಲ್ಲಾ ಯಾಜಕನವುಗಳಾಗಿಯೇ ಇರಬೇಕು.
Kannada Bible (KNCL) BSI 2016
ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.