Numbers 6:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
Kannada BSI Bible 2016
ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎಷ್ಟು ದಿನಗಳವರೆಗೆ ತನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು; ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರುಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದದರಿಂದ ಕಳೆದುಹೋದ ದಿನಗಳು ವ್ಯರ್ಥವಾದವು.
Kannada Bible (KNCL) BSI 2016
ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.