Numbers 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
Kannada BSI Bible 2016
ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಜೀರನು ತನ್ನ ವ್ರತದಿನಗಳು ಮುಗಿದಾಗ ನಡೆಯಬೇಕಾದ ಕ್ರಮ. ಅವನು ದೇವದರ್ಶನದ ಗುಡಾರದ ಬಾಗಲಿಗೆ ಬಂದು ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವವಂದರೆ -
Kannada Bible (KNCL) BSI 2016
ನಾಜೀರ ವ್ರತಸ್ಥನು ತನ್ನ ವ್ರತಾವಧಿ ಮುಗಿದಾಗ ಈ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬಂದು ಸರ್ವೇಶ್ವರನಿಗೆ ಈ ಕಾಣಿಕೆಗಳನ್ನು ಸಲ್ಲಿಸಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.