Numbers 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕನು ಹುಳಿಯಿಲ್ಲದ ರೊಟ್ಟಿಯಿರುವ ಪುಟ್ಟಿಯನ್ನು ಯೆಹೋವನಿಗೆ ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆಯೊಂದಿಗೆ ಅರ್ಪಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
Kannada BSI Bible 2016
ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಟಗರನ್ನೂ ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ ಯೆಹೋವನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
Kannada Bible (KNCL) BSI 2016
ಅನಂತರ ಟಗರನ್ನೂ ಬುಟ್ಟಿ ತುಂಬಿರುವ ಹುಳಿಯಿಲ್ಲದ ರೊಟ್ಟಿಗಳನ್ನೂ ಸರ್ವೇಶ್ವರನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ತಂದ ಧಾನ್ಯದ್ರವ್ಯ - ಪಾನದ್ರವ್ಯಗಳನ್ನು ಯಾಜಕನು ನೈವೇದ್ಯ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು.