Numbers 6:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಯ ಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
Kannada BSI Bible 2016
ಇದಲ್ಲದೆ ನಾಜೀರನು ಪ್ರತ್ಯೇಕಿಸಿಕೊಂಡ ತನ್ನ ತಲೆಯನ್ನು ಸಭೆಯ ಗುಡಾರದ ಬಾಗಲಿನ ಬಳಿಯಲ್ಲಿ ಬೋಳಿಸಿ ಪ್ರತ್ಯೇಕಿಸಿದ ತನ್ನ ತಲೆಯ ಕೂದಲನ್ನು ತಕ್ಕೊಂಡು ಸಮಾಧಾನದ ಅರ್ಪಣೆಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾಜೀರನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯಕೂದಲನ್ನು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
Kannada Bible (KNCL) BSI 2016
ಬಳಿಕ ನಾಜೀರ ವ್ರತಸ್ಥನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಬಲಿಯ ದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.