Numbers 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
Kannada BSI Bible 2016
ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಒಂದು ಹುಳಿಯಿಲ್ಲದ ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡನಂತರ ಅವನ ಕೈಯಲ್ಲಿ ಇಟ್ಟು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
Kannada Bible (KNCL) BSI 2016
ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನು ಬುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು ಹಾಗೂ ಹುಳಿಯಿಲ್ಲದ ಒಂದು ಕಡುಬನ್ನು ತೆಗೆದುಕೊಂಡು ನಾಜೀರ ವ್ರತಸ್ಥನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಇಡಬೇಕು; ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು.