Numbers 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
Kannada BSI Bible 2016
ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.
Kannada Bible (KNCL) BSI 2016
ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.