Numbers 6:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
Kannada BSI Bible 2016
ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತ್ಯನುಸಾರ ಹೆಚ್ಚಾಗಿಯೂ ಕೊಡಬಹುದು; ಆದರೆ ತಾವು ಕೊಡುತ್ತೇವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.
Kannada Bible (KNCL) BSI 2016
ಇದುವೇ ನಾಜೀರ ವ್ರತಸ್ಥರು ಅನುಸರಿಸಬೇಕಾದ ವಿಧಿ. ತಮ್ಮ ವ್ರತಪೂರ್ತಿಗಾಗಿ ಸರ್ವೇಶ್ವರನಿಗೆ ಅವರು ಸಮರ್ಪಿಸಬೇಕಾದ ಕಾಣಿಕೆ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತ ವಿಧಿಗನುಸಾರ ಕೊಡಲೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ”