Numbers 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
Kannada BSI Bible 2016
ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿವಿುತ್ತ ಅವನು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
Kannada Bible (KNCL) BSI 2016
ತಾಯಿತಂದೆ, ಅಣ್ಣತಮ್ಮ, ಅಕ್ಕತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಕೈಗೊಂಡ ವ್ರತ ಅವನ ತಲೆಯ ಮೇಲಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ.