Numbers 6:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಾವನಾದರೂ ಇದ್ದಕ್ಕಿದ್ದಂತೆ ಅವನ ಬಳಿಯಲ್ಲೇ ಸತ್ತದ್ದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ತಲೆಯನ್ನು ಕ್ಷೌರ ಮಾಡಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
Kannada BSI Bible 2016
ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಅಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
Kannada Bible (KNCL) BSI 2016
ಆಕಸ್ಮಿಕವಾಗಿ ಯಾರಾದರೂ ಅವನ ಬಳಿಯಲ್ಲೇ ಸತ್ತು, ಅವನು ಪ್ರತಿಷ್ಠಿಸಿಕೊಂಡಿದ್ದ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಂದು ಅಂದರೆ ಶುದ್ಧೀಕರಣ ದಿನದಂದು ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.