Numbers 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ, “ಪ್ರತಿದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೋಶೆಗೆ - ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿಪೀಠದ ಪ್ರತಿಷ್ಠೆಗಾಗಿ ತಮ್ಮ ಕಾಣಿಕೆಯನ್ನು ಅರ್ಪಿಸಬೇಕು.”