Numbers 7:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
Kannada BSI Bible 2016
ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;
Kannada Bible (KNCL) BSI 2016
ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.