Numbers 7:88 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮಾಧಾನಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರ್ಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
Kannada BSI Bible 2016
ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನಯಜ್ಞಕ್ಕಾಗಿ ಕೊಟ್ಟ ಪಶುಗಳು - ಹೋರಿಗಳು 24, ಟಗರುಗಳು 60, ಹೋತಗಳು 60, ವರುಷದ ಕುರಿಗಳು 60. ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಾನದ ಬಲಿಗಾಗಿರುವ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ ಗಂಡು ಕುರಿಮರಿಗಳು 60. ಅದನ್ನು ಅಭಿಷೇಕಿಸಿದ ತರುವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆ ಇದಾಗಿತ್ತು.