Numbers 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.
Kannada BSI Bible 2016
ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ; ದೇವದರ್ಶನದ ಗುಡಾರದ ಸಾಮಾನುಗಳನ್ನು ವಹಿಸುವದೇ ಅವರಿಗೆ ನೇಮಕವಾದ ಕೆಲಸ; ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.
Kannada Bible (KNCL) BSI 2016
ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.