Numbers 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
Kannada BSI Bible 2016
ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಯೆಹೋವನಿಗೆ ದೋಷಪರಿಹಾರಕಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನೂ ಸಮರ್ಪಿಸಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
Kannada Bible (KNCL) BSI 2016
ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಸರ್ವೇಶ್ವರನಿಗೆ ಪಾಪಪರಿಹಾರಕ ಬಲಿಗಾಗಿ ಒಂದು ಹೋರಿಯನ್ನು, ಹಾಗು ದಹನಬಲಿಗಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಿ ಅವರಿಗಾಗಿ ಪಾಪಪರಿಹಾರವನ್ನು ಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.