Numbers 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ರೀತಿಯಲ್ಲಿ ನೀನು ಲೇವಿಯರನ್ನು ಆರೋನ ಮತ್ತು ಅವನ ಪುತ್ರರ ಅಧೀನದಲ್ಲಿ ಸೇವೆ ಮಾಡುವಂತೆ ಮಾಡುವೆ ಮತ್ತು ಲೇವಿಯರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಸಲ್ಲಿಸುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.
Kannada BSI Bible 2016
ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಯೆಹೋವನಿಗೆ ಸಮರ್ಪಿಸಬೇಕು.
Kannada Bible (KNCL) BSI 2016
“ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಸರ್ವೇಶ್ವರನಿಗೆ ಸಮರ್ಪಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.