Numbers 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ಲೇವಿಯರು ಇಸ್ರೇಲರ ಮಧ್ಯದಿಂದ ನನಗಾಗಿ ಸಂಪೂರ್ಣವಾಗಿ ಪ್ರತಿಷ್ಠಿತರಾಗಿದ್ದಾರೆ. ಇಸ್ರೇಲರ ಚೊಚ್ಚಲು ಗಂಡುಮಕ್ಕಳಿಗೆ ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
Kannada BSI Bible 2016
ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಲ್ಲಿ ಇವರು ನನಗೆ ಸಂಪೂರ್ಣವಾಗಿ ವಶವಾದವರು; ಪ್ರಥಮಗರ್ಭಕ್ಕೆ ಬದಲಾಗಿ ಅಂದರೆ ಇಸ್ರಾಯೇಲ್ಯರ ಚೊಚ್ಚಲುಮಕ್ಕಳಿಗೆ ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
Kannada Bible (KNCL) BSI 2016
ಇಸ್ರಯೇಲರಲ್ಲಿ ಇವರೇ ನನಗೆ ಸಂಪೂರ್ಣವಾಗಿ ಸಮರ್ಪಿತರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಯೇಲರ ಜೇಷ್ಠಪುತ್ರರಿಗೆ, ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.