Numbers 8:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
Kannada BSI Bible 2016
ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡಿಸಲಾರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.
Kannada Bible (KNCL) BSI 2016
ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.