Numbers 8:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”
Kannada BSI Bible 2016
ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದೇ ಹೊರತು ಅವರಿಂದ ಬೇರೆ ಪರಿಚರ್ಯವನ್ನು ಮಾಡಿಸಕೂಡದು. ಲೇವಿಯರು ಕಾಪಾಡಬೇಕಾದವುಗಳ ವಿಷಯದಲ್ಲಿ ನೀನು ಹೀಗೆ ಅವರಿಗೆ ನೇವಿುಸಬೇಕು.
Kannada Bible (KNCL) BSI 2016
ಅಂಥವರು ತಮ್ಮ ಸ್ವಕುಲದವರ ಜೊತೆ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದು. ಅದೊಂದನ್ನು ಬಿಟ್ಟು ಅವರಿಂದ ಬೇರೆ ಪರಿಚರ್ಯೆಯನ್ನು ಮಾಡಿಸಕೂಡದು. ಲೇವಿಯರು ಮಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ವಿಧಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.