Numbers 8:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಆರೋನನು ಮಾಡಿದನು. ಆರೋನನು ದೀಪಗಳನ್ನು ಸರಿಯಾದ ಸ್ಥಳದಲ್ಲಿಟ್ಟು ಅವುಗಳು ದೀಪಸ್ತಂಭದ ಎದುರಿನಲ್ಲಿ ಪ್ರಕಾಶಿಸುವಂತೆ ಮಾಡಿದನು. ಹೀಗೆ ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.
Kannada BSI Bible 2016
ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು; ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಬೀಳುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.
Kannada Bible (KNCL) BSI 2016
ಅಂತೆಯೇ ಆ ದೀಪಗಳನ್ನು ಕ್ರಮವಾಗಿ ಇಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.