Numbers 8:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೀಪಸ್ತಂಭವನ್ನು ಅದರ ಬುಡದಿಂದ ಪುಷ್ಪಾಲಂಕಾರಗಳವರೆಗೂ ಸಂಪೂರ್ಣವಾಗಿ ಚಿನ್ನದ ತಗಡಿನಿಂದ ಮಾಡಲಾಗಿತ್ತು. ಯೆಹೋವನು ಮೋಶೆಗೆ ತೋರಿಸಿದ ಮಾದರಿಯಂತೆ ಅದು ಮಾಡಲ್ಪಟ್ಟಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು.
Kannada BSI Bible 2016
ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೀಪಸ್ತಂಭವು ಅದರ ಬುಡವೂ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.
Kannada Bible (KNCL) BSI 2016
ಆ ದೀಪಸ್ತಂಭದ ಬುಡಭಾಗವೂ ಅದರ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿದ್ದವು. ಸರ್ವೇಶ್ವರ ತೋರಿಸಿದ್ದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು.