Numbers 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರನ್ನು ಶುದ್ಧೀಕರಿಸುವ ಕ್ರಮ ಹೇಗೆಂದರೆ, “ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮಿಕಿಸಬೇಕು. ಬಳಿಕ ಅವರು ಸರ್ವಾಂಗಕ್ಷೌರ ಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಹೀಗೆ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.
Kannada BSI Bible 2016
ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗಂದರೆ - ನೀನು ಅವರ ಮೇಲೆ ದೋಷಪರಿಹಾರಕಜಲವನ್ನು ಚಿವಿುಕಿಸಬೇಕು; ಅವರು ಸರ್ವಾಂಗಕ್ಷೌರಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಬೇಕು.
Kannada Bible (KNCL) BSI 2016
ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.