Numbers 9:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ನಂತರ ಎರಡನೆ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿದನು. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಐಗುಪ್ತ ದೇಶವನ್ನು ಬಿಟ್ಟುಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ, ಸೀನಾಯಿ ಅರಣ್ಯದಲ್ಲಿ ಯೆಹೋವನು ಮೋಶೆಗೆ,
Kannada BSI Bible 2016
ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟುಬಂದ ಎರಡನೆಯ ವರುಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಅರಣ್ಯದಲ್ಲಿ
Kannada Bible (KNCL) BSI 2016
ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಯೊಂದಿಗೆ ಮಾತನಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು: