Numbers 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: “ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಮನುಷ್ಯಶವ ಸೋಂಕಿದ್ದರಿಂದ ಅಶುದ್ಧರಾದವರೂ ದೂರಪ್ರಯಾಣದಲ್ಲಿರುವವರೂ ಸಹ ಯೆಹೋವನ ಪಸ್ಕಹಬ್ಬವನ್ನು ಆಚರಿಸಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’
Kannada BSI Bible 2016
ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.
Kannada Bible (KNCL) BSI 2016
“ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.