Numbers 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆ ವೇಳೆಯಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಆ ಸಮಯದಲ್ಲಿ ಅವರು ಪಸ್ಕದ ಕುರಿಮರಿಯ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳೊಡನೆ ಮತ್ತು ಕಹಿಯಾದ ಸೊಪ್ಪುಗಳೊಡನೆ ಊಟಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.
Kannada BSI Bible 2016
ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.
Kannada Bible (KNCL) BSI 2016
ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಅದನ್ನು ಆಚರಿಸಬೇಕು. ಹುಳಿಯಿಲ್ಲದ ರೊಟ್ಟಿ ಮತ್ತು ಕಹಿಯಾದ ಸೊಪ್ಪುಸದೆಗಳೊಂದಿಗೆ ಅದನ್ನು ಊಟಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.