Numbers 9:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಆ ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
Kannada BSI Bible 2016
ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ವಿುಗಿಸಬಾರದು; ಆ ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ಪ್ರಕಾರವೇ ಅದನ್ನು ಆಚರಿಸಬೇಕು.
Kannada Bible (KNCL) BSI 2016
ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಮಿಗಿಸಬಾರದು. ಅದರ ಒಂದು ಎಲುಬನ್ನಾದರೂ ಮುರಿಯಬಾರದು. ಪಾಸ್ಕ ಹಬ್ಬ ಕುರಿತ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು.