Numbers 9:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು ಮತ್ತು ಅದು ರಾತ್ರಿಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
Kannada BSI Bible 2016
ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿರುವದು.
Kannada Bible (KNCL) BSI 2016
ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.