Numbers 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮೇಘವು ಪವಿತ್ರ ಗುಡಾರದಿಂದ ಮೇಲಕ್ಕೆ ಎದ್ದಾಗಲೆಲ್ಲಾ ಇಸ್ರೇಲರು ಮುಂದಕ್ಕೆ ಪ್ರಯಾಣಮಾಡುವರು. ಆ ಮೇಘವು ನಿಂತಲ್ಲೆಲ್ಲಾ ಇಸ್ರೇಲರು ಪಾಳೆಯ ಮಾಡಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲರು ಮುಂದಕ್ಕೆ ಪ್ರಯಾಣಮಾಡುತ್ತಿದ್ದರು. ಆ ಮೇಘವು ಎಲ್ಲಿ ನಿಲ್ಲುವುದೋ ಅಲ್ಲಿ ಇಸ್ರಾಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.
Kannada BSI Bible 2016
ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೇಘವು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಾಯೇಲ್ಯರು ಮುಂದಕ್ಕೆ ಪ್ರಯಾಣಮಾಡುವರು.
Kannada Bible (KNCL) BSI 2016
ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.