Numbers 9:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೇಮಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲಿಯೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು” ಎಂದು ಹೇಳಿದನು.
Kannada BSI Bible 2016
ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿರೂಪಿಸಿದ ಆಜ್ಞಾವಿಧಿಗಳ ಪ್ರಕಾರ ನೇಮಕವಾದ ಕಾಲದಲ್ಲೇ ಅಂದರೆ ಈ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ನೀವು ಅದನ್ನು ಆಚರಿಸಬೇಕು ಎಂದು ಹೇಳಿದನು.
Kannada Bible (KNCL) BSI 2016
ಈ ತಿಂಗಳಿನ ಹದಿನಾಲ್ಕನೇ ದಿನದ ಸಂಜೆ ಅದನ್ನು ಆಚರಿಸಬೇಕಾದ ನಿಯಮಿತ ವೇಳೆ. ಅದನ್ನು ಎಲ್ಲ ವಿಧಿನಿಯಮಗಳ ಪ್ರಕಾರ ಆಚರಿಸಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.”