Numbers 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.
Kannada BSI Bible 2016
ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಅದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.
Kannada Bible (KNCL) BSI 2016
ಅವರು ಅದಕ್ಕನುಗುಣವಾಗಿ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಾಸ್ಕವನ್ನು ಆಚರಿಸಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.